Posts

ಗ್ವಾಲಿಯರ್-ಇಂದೋರ್ ನಡುವಿನ ಮೊದಲ ನೇರ ವಿಮಾನಯಾನಕ್ಕೆ ಚಾಲನೆ ನೀಡಿದ ನಾಗರಿಕ ವಿಮಾನಯಾನ ಖಾತೆ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ

Image
 ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ, ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಜನರಲ್ ಡಾ.ವಿ.ಕೆ.ಸಿಂಗ್ (ನಿವೃತ್ತ) ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಶ್ರೀ ಪ್ರದೀಪ್ ಖರೋಲಾ ಅವರ ಸಮಕ್ಷಮದಲ್ಲಿ ಇಂದು ಮಧ್ಯಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮತ್ತು ದೇಶೀಯ ವೈಮಾನಿಕ ಸಂಪರ್ಕ ಬಲವರ್ಧನೆಗೊಳಿಸುವ ಉದ್ದೇಶದ ಎರಡು ವಿಮಾನಗಳ ಸಂಚಾರಕ್ಕೆ ವರ್ಚುವಲ್ ರೂಪದಲ್ಲಿ ಹಸಿರು ನಿಶಾನೆ ತೋರಲಾಯಿತು. ಈ ಕಾರ್ಯಕ್ರಮದಲ್ಲಿ ದೆಹಲಿ ಮಾರ್ಗವಾಗಿ ಗ್ವಾಲಿಯರ್-ಇಂದೋರ್ (ಮಧ್ಯಪ್ರದೇಶ) ನಡುವೆ ಇಂಡಿಗೋದ ನೇರ ಮೊದಲ ವಿಮಾನ ಸಂಚಾರ ಆರಂಭಕ್ಕೆ ಮತ್ತು ಇಂದೋರ್ (ಮಧ್ಯಪ್ರದೇಶ)- ದುಬೈ (ಯುಎಇ) ನಡುವೆ  ಏರ್ ಇಂಡಿಯಾದ ನೇರ ವಿಮಾನ ಸಂಚಾರ ಪುನರಾರಂಭಕ್ಕೆ ಚಾಲನೆ ನೀಡಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಂದ ಆಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ “ನ್ಯೂಟ್ರಿ ಗಾರ್ಡನ್" ಉದ್ಗಾಟನೆ

Image
 ಪೋಷಣ್ ಮಾಸ 2021ರಡಿ ತಿಂಗಳಿಡೀ ನಡೆಯುವ ಸರಣಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸೃತಿ ಜುಬಿನ್ ಇರಾನಿ ಅವರು “ದೇಶದ ಪೌಷ್ಟಿಕಾಂಶ ಅಗತ್ಯವನ್ನು ಪೂರೈಸಲು ಆಯುರ್ವೇದದ ಮೂಲಿಕೆಗಳ ಮೂಲಕ ಪುರಾತನ ಬುದ್ಧಿವಂತಿಕೆಯನ್ನು ಹೇಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು ಎಂಬ ಬಗ್ಗೆ ಅರಿವು ಮೂಡಿಸುವುದಕ್ಕೆ ಇದು ಸಕಾಲ.”ಎಂದು ಹೇಳಿದರು. 

ಮಾನವ ಕುಲ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಲು ವಿನೂತನ ಪರಿಹಾರ ಒದಗಿಸಲು ಮುಂದಾಗುವಂತೆ ವಿಜ್ಞಾನಿಗಳಿಗೆ ಉಪ ರಾಷ್ಟ್ರಪತಿ ಕರೆ

Image
 ಹವಾಮಾನ ಬದಲಾವಣೆಯಿಂದ ಕೃಷಿ, ಆರೋಗ್ಯ ಮತ್ತು ವೈದ್ಯಕೀಯದವರೆಗೆ ಮಾನವಕುಲ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಲು ವಿಜ್ಞಾನಿಗಳು ವಿನೂತನ ಪರಿಹಾರಗಳನ್ನು ಶೋಧಿಸುವಂತೆ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರು ಇಂದು ಕರೆ ನೀಡಿದ್ದಾರೆ. ಬೆಂಗಳೂರಿನ ಜವಾಹರಲಾಲ್ ನೆಹರೂ ಮುಂದುವರಿದ ವೈಜ್ಞಾನಿಕ ಸಂಶೋಧನಾ ಕೇಂದ್ರ (ಜೆಎನ್.ಸಿ.ಎ.ಎಸ್.ಆರ್) ದಲ್ಲಿ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿಯವರು, ಉತ್ಕೃಷ್ಟತೆಯನ್ನು ಸಾಧಿಸಲು ಮತ್ತು ಜನರ ಜೀವನವನ್ನು ಸುಧಾರಿಸಲು ಸಂಶೋಧನೆಗಾಗಿ ಶ್ರಮಿಸುವಂತೆ ವಿಜ್ಞಾನಿಗಳಿಗೆ ಒತ್ತಾಯಿಸಿದರು. "ವಿಜ್ಞಾನದ ಉದ್ದೇಶ ಜನರ ಜೀವನವನ್ನು ಸಂತೋಷ, ಆರೋಗ್ಯಕರ ಮತ್ತು ಆರಾಮದಾಯಕವಾಗಿ ಮಾಡುವುದಾಗಿದೆ", ಎಂದು ಅವರು ಪುನರುಚ್ಚರಿಸಿದರು.

ಪೆಟ್ರೋಲ್‌ನಲ್ಲಿ ಶೇ.20 ರಷ್ಟು ಎಥೆನಾಲ್ ಮಿಶ್ರಣದ ಗುರಿಯನ್ನು ನಿಗದಿಗೂ ಮೊದಲೇ 2025 ಕ್ಕೆ ಸಾಧಿಸಲಾಗುವುದು : ಪ್ರಧಾನಿ

Image
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಜಂಟಿಯಾಗಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಿಯವರು ಪುಣೆಯ ರೈತನೊಂದಿಗೆ ಸಂವಾದ ನಡೆಸಿದರು, ಆ ರೈತ ಸಾವಯವ ಕೃಷಿ ಮತ್ತು ಕೃಷಿಯಲ್ಲಿ ಜೈವಿಕ ಇಂಧನ ಬಳಕೆಯ ಅನುಭವವನ್ನು ಪ್ರಧಾನಿವರೊಂದಿಗೆ ಹಂಚಿಕೊಂಡರು. "ಭಾರತದಲ್ಲಿ 2020-2025ರಲ್ಲಿ ಎಥೆನಾಲ್ ಮಿಶ್ರಣಕ್ಕಾಗಿ ಮಾರ್ಗಸೂಚಿ ಕುರಿತ ತಜ್ಞರ ಸಮಿತಿಯ ವರದಿ" ಯನ್ನು ಪ್ರಧಾನಿ ಬಿಡುಗಡೆ ಮಾಡಿದರು. ದೇಶಾದ್ಯಂತ ಎಥೆನಾಲ್ ಉತ್ಪಾದನೆ ಮತ್ತು ವಿತರಣೆಗಾಗಿ ಅವರು ಪುಣೆಯಲ್ಲಿ ಮಹತ್ವಾಕಾಂಕ್ಷೆಯ ಇ -100 ಪ್ರಾಯೋಗಿಕ  ಯೋಜನೆಗೆ ಚಾಲನೆ ನೀಡಿದರು. ಈ ವರ್ಷದ ಕಾರ್ಯಕ್ರಮದ ಧ್ಯೇಯ ‘ಉತ್ತಮ ಪರಿಸರಕ್ಕಾಗಿ ಜೈವಿಕ ಇಂಧನಗಳ ಉತ್ತೇಜನ. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ನರೇಂದ್ರ ಸಿಂಗ್ ತೋಮರ್, ಶ್ರೀ ಪ್ರಕಾಶ್ ಜಾವಡೇಕರ್, ಶ್ರೀ ಪಿಯೂಷ್ ಗೋಯಲ್ ಮತ್ತು ಶ್ರೀ ಧರ್ಮೇಂದ್ರ ಪ್ರಧಾನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕೇಂದ್ರ ಸರ್ಕಾರದಿಂದ ಯುವ ಲೇಖಕರ ಮಾರ್ಗದರ್ಶನಕ್ಕೆ ಯುವ-ಪ್ರಧಾನಮಂತ್ರಿಗಳ ಕಾರ್ಯಕ್ರಮ ಆರಂಭ

Image
 ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆ ಇಂದು ಯುವ ಲೇಖಕರಿಗೆ ಮಾರ್ಗದರ್ಶನ ನೀಡುವ ಯುವ-ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ದೇಶದಲ್ಲಿ ಓದುವುದು, ಬರೆಯುವುದು ಮತ್ತು ಪುಸ್ತಕ ಸಂಸ್ಕೃತಿಯನ್ನು ಉತ್ತೇಜಿಸುವುದು ಹಾಗೂ ಭಾರತದ ಬರಹಗಳನ್ನು ಜಾಗತಿಕವಾಗಿ ಜನಪ್ರಿಯಗೊಳಿಸುವುದು, ಭಾರತವನ್ನು ಬಿಂಬಿಸುವ ಉದ್ದೇಶದಿಂದ ಯುವ ಮತ್ತು ಉದಯೋನ್ಮುಖ ಲೇಖಕರಿಗೆ (30 ವರ್ಷದೊಳಗಿನವರು) ತರಬೇತಿ ಮತ್ತು ಮಾರ್ಗದರ್ಶನ ನೀಡುವ ಕಾರ್ಯಕ್ರಮ ಇದಾಗಿದೆ.

12ನೇ ತರಗತಿ ಪರೀಕ್ಷೆಗಳು ಮತ್ತು ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಚರ್ಚಿಸಲು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಾಳೆ ಉನ್ನತ ಮಟ್ಟದ ಸಭೆ

Image
 12ನೇ ತರಗತಿ ಪರೀಕ್ಷೆ ಮತ್ತು ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಪ್ರಸ್ತಾಪಗಳ ಬಗ್ಗೆ ಚರ್ಚಿಸಲು ನಾಳೆ ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಸಚಿವರು, ಶಿಕ್ಷಣ ಕಾರ್ಯದರ್ಶಿಗಳು ಮತ್ತು ರಾಜ್ಯ ಪರೀಕ್ಷಾ ಮಂಡಳಿಗಳ ಅಧ್ಯಕ್ಷರು ಮತ್ತು ಮಧ್ಯಸ್ಥಗಾರರೊಂದಿಗೆ ಉನ್ನತ ಮಟ್ಟದ ವರ್ಚ್ಯುಯಲ್‌ ಸಭೆ ಆಯೋಜಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ, ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್, ಕೇಂದ್ರ ಮಹಿಳಾ ಮತ್ತು ಮಕ್ಕಳ ಸಚಿವೆ ಶ್ರೀಮತಿ ಸ್ಮೃತಿ ಜುಬಿನ್ ಇರಾನಿ ಮತ್ತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.

ರಾಜ್ಯದಲ್ಲಿ ತಕ್ಷಣದ ಪರಿಹಾರ ಕಾರ್ಯಗಳಿಗಾಗಿ 1,000 ಕೋಟಿ ರೂ. ನೆರವು ಘೋಷಿಸಿದ ಪ್ರಧಾನಿ

Image
  ತೌಕ್ತೇ ಚಂಡಮಾರುತದಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದರು. ಗುಜರಾತ್ ಮತ್ತು ದಿಯುನಲ್ಲಿ ಉನಾ (ಗಿರ್ - ಸೋಮನಾಥ್), ಜಾಫ್ರಾಬಾದ್ (ಅಮ್ರೇಲಿ), ಮಾಹುವಾ (ಭಾವನಗರ) ದಲ್ಲಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನಡೆಸಿದರು. ನಂತರ ಅವರು ಗುಜರಾತ್ ಮತ್ತು ದಿಯುನಲ್ಲಿ ಕೈಗೊಳ್ಳುತ್ತಿರುವ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಪರಿಶೀಲಿಸಲು ಅಹಮದಾಬಾದ್ ನಲ್ಲಿ ಸಭೆ ನಡೆಸಿದರು.