ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಹ್ರೈಚ್ ನಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಮಹಾರಾಜ ಸುಹೆಲ್‌ದೇವ್ ಹೆಸರನ್ನು ನಾಮಕರಣ ಮಾಡಿರುವ ವೈದ್ಯಕೀಯ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.